Posted on June 25, 2021 by admin ಮಕ್ಕಳು ವಿಶ್ವದ ಅತ್ಯಮೂಲ್ಯ ಸಂಪನ್ಮೂಲ ಮತ್ತು ಅವರನ್ನು ಕಾಪಾಡುವುದು ನಮ್ಮೆಲ್ಲರ ಹೊಣೆ …… ದಿನಾಂಕ 24.6.2021 ರಂದು ಬೆಳಗ್ಗೆ 11ಗಂಟೆಗೆ ಸರಿಯಾಗಿ ವಾಣಿವಿಲಾಸಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಎನ್. ಶೃತಿ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಯುತ ಬಿ.ಎಸ್. ಕೆಂಚಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಹಸೀನ ಖಾನಂ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಿವಲಿಂಗಮ್ಮ , ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಯುತ ಮುಬಾರಕ್ , ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ಶಾರದಮ್ಮ, ಗ್ರಾಮ ಲೆಕ್ಕಾಧಿಕಾರಿ ಶ್ರೀಯುತ ಗಿರೀಶ್, ಪೊಲೀಸ್ ಇಲಾಖೆಯಿಂದ ಶ್ರೀಯುತ ತಿಮ್ಮೇಶ್ ರವರು ಉಪಸ್ಥಿತರಿದ್ದರು. ಈ ಸಮಯದಲ್ಲಿ ಚಿತ್ರ ಡಾನ್ ಬೋಸ್ಕೊ ಸಂಸ್ಥೆಯ ಕ್ರೀಮ್ ಸಿಬ್ಬಂದಿಯಾದ ಶ್ರೀಯುತ ಮಹಾಂತೇಶ್ ರವರು ಕ್ರೀಂ ಯೋಜನೆಯ ಬಗ್ಗೆ, ಮಕ್ಕಳ ಹಕ್ಕುಗಳು, ಶಾಲೆಯಲ್ಲಿ ಮಕ್ಕಳ ದಾಖಲಾತಿ, ಮಕ್ಕಳ ಸುರಕ್ಷತೆ, ಬಾಲ್ಯ ವಿವಾಹ ನಿರ್ಮೂಲನೆಗೆ ಇರುವ ಕಾಯ್ದೆ ಕಾನೂನುಗಳು, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಮಕ್ಕಳ ರಕ್ಷಣಾ ಸಮಿತಿಯ ಗುರಿ ಉದ್ದೇಶಗಳ ಬಗ್ಗೆ ಮಾಹಿತಿ ತಿಳಿಸಿದರು. Share this:Click to share on Twitter (Opens in new window)Click to share on Facebook (Opens in new window)Click to share on WhatsApp (Opens in new window)Click to share on Telegram (Opens in new window)